Тёмный

1 ಪೇತ್ರ 4:1-19 Bro/Jesus Bible@KannadaBible103 

KannadaBible103
Подписаться 213
Просмотров 41
50% 1

1 ಪೇತ್ರ 4:1-19 Bro/Jesus Bible@KannadaBible103
ಕ್ರೈಸ್ತರು ಅಜ್ಞಾನಿಗಳ ದುಷ್ಕೃತ್ಯಗಳನ್ನು ವಿಸರ್ಜಿಸಿಬಿಟ್ಟು ಬರುವ ನ್ಯಾಯವಿಚಾರಣೆಯನ್ನು ಎದುರುನೋಡುತ್ತಾ ಭಯಭಕ್ತಿಯಿಂದ ನಡೆಯಬೇಕು
41 ✽ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ. 2 ಯಾಕಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪದ ವಶದಿಂದ ತಪ್ಪಿಸಿಕೊಂಡವನಾಗಿ ಉಳಿದಿರುವ ತನ್ನ ಜೀವಮಾನಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವದಕ್ಕೆ ಪ್ರಯತ್ನಮಾಡುವನು. 3 ✽ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ✽ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು. 4 ✽ತಾವು ಮಾಡುವ ಅಪರಿವಿುತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ. 5 ಅವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರಕೊಡಬೇಕು.✽ 6 ✽ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಿಗಳಾಗಿದ್ದಾಗ ಹೊಂದಿದರು; ಅವರು✽ ಆತ್ಮ ಸಂಬಂಧವಾಗಿ ದೇವರ ಜೀವದಲ್ಲಿ ಪಾಲುಗಾರರಾಗುವಂತೆ ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟತು.
7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ;✽ ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ✽ ಇರ್ರಿ. 8 ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ;✽ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.✽ 9 ✽ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿರಿ.✽ 10 ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು✽ ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು✽ ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. 11 ಒಬ್ಬನು ಬೋಧಿಸುವವನಾದರೆ✽ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸಭೆಯ ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ✽ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವದು.✽ ಯೇಸು ಕ್ರಿಸ್ತನಿಗೆ ಆಧಿಪತ್ಯವೂ ಘನವೂ ಯುಗಯುಗಾಂತರಗಳಲ್ಲಿಯೂ ಇರುವವು. ಆಮೆನ್.
12 ಪ್ರಿಯರೇ, ನೀವು ಪರಿಶೋಧನೆಗಾಗಿ ಪುಟಕ್ಕೆ ಹಾಕಲ್ಪಟ್ಟದ್ದಕ್ಕೆ✽ ಆಶ್ಚರ್ಯಪಡಬೇಡಿರಿ;✽ ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. 13 ಆದರೆ ನೀವು ಎಷ್ಟರ ಮಟ್ಟಿಗೂ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷವುಳ್ಳವರಾಗಿರ್ರಿ;✽ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ✽ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ. 14 ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ;✽ ತೇಜೋಮಯವಾದ ಆತ್ಮನಾಗಿರುವ✽ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ. 15 ✽ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರಕಾರ್ಯಗಳಲ್ಲಿ ತಲೆಹಾಕುವವನು✽ ಆಗಿದ್ದು ಶಿಕ್ಷಾಪಾತ್ರನಾಗಬಾರದು. 16 ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ✽ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.
17 ನ್ಯಾಯವಿಚಾರಣೆಯ✽ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ✽ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ✽ ಗತಿ ಏನಾಗಬಹುದು? 18 ✽ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ✽ ಭಕ್ತಿಹೀನನೂ✽ ಪಾಪಿಷ್ಠನೂ ನಿಲ್ಲುವದು ಹೇಗೆ? 19 ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೇದನ್ನು ಮಾಡುವವರಾಗಿದ್ದು✽ ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.✽

Опубликовано:

 

25 сен 2024

Поделиться:

Ссылка:

Скачать:

Готовим ссылку...

Добавить в:

Мой плейлист
Посмотреть позже
Комментарии    
Далее
НОВЫЙ РОЛИК УЖЕ НА КАНАЛЕ!
00:14
Просмотров 869 тыс.